Karnataka Weather Forecast: ಕರ್ನಾಟಕದ ಹಲವೆಡೆ ಇಂದು-ನಾಳೆ ಮಳೆ; ಕರಾವಳಿಯಲ್ಲಿ ಭಾರಿ ಗಾಳಿಯ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಆಗಸ್ಟ್ 21 ಮತ್ತು 22ರಂದು ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಇದೆ.

ಮುಖ್ಯಾಂಶಗಳು
- ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಉತ್ತರ ಒಳನಾಡಿನ ಹಲವೆಡೆ ಗಾಳಿ ಸಹಿತ ಮಳೆ
- ದಕ್ಷಿಣ ಒಳನಾಡಿಗೂ ಮಳೆಯ ಮುನ್ಸೂಚನೆ
ಬೆಂಗಳೂರು, ಆಗಸ್ಟ್ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಸಾಮಾನ್ಯವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆ ಆಗಸ್ಟ್ 21 ಮತ್ತು 22ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಮುನ್ಸೂಚನೆ ನೀಡಿದೆ.
ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶ
24-Hour #Rainfall #Forecast for #Karnataka COASTAL KARNATAKA Light to moderate rain with sustained wind (30-40 Kmph) likely to occur at most places over Dakshina Kannada, Udupi and Uttara Kannada districts.
NORTH INTERIOR KARNATAKA Light to moderate rain with sustained wind
— Karnataka State Natural Disaster Monitoring Centre (@KarnatakaSNDMC) August 20, 2026
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆ
ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೂ ಮಳೆ ಮುನ್ಸೂಚನೆ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಆಗಸ್ಟ್ 21 ಮತ್ತು 22ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೂ ಬೀಸಬಹುದು.
ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ದಾಖಲಾಗಿದೆ. ಆದರೆ ಯಾವುದೇ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಮಳೆಯಾಗಿಲ್ಲ. ಕಳೆದ ಅವಧಿಯಲ್ಲಿ ಕೊಪ್ಪಳದಲ್ಲಿ 6 ಸೆಂ.ಮೀ, ಶಿವಮೊಗ್ಗದ ಆಗುಂಬೆ ಎಡಬ್ಲ್ಯುಎಸ್‌ನಲ್ಲಿ 5 ಸೆಂ.ಮೀ, ಉಡುಪಿಯ ಕಾರ್ಕಳದಲ್ಲಿ 5 ಸೆಂ.ಮೀ ಹಾಗೂ ಉಡುಪಿಯಲ್ಲಿ 5 ಸೆಂ.ಮೀ ಮಳೆ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ: ಸಿಲಿಕಾನ್ ಸಿಟಿ ಕೂಲ್ ಕೂಲ್
ಮುಂದಿನ ಎರಡು ದಿನಗಳಲ್ಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಇಲಾಖೆ ಸಲಹೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




