ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಕ್ಷೀಣ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 9: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಸೆಪ್ಟೆಂಬರ್ 9 ರಂದು ಮಳೆ ಸಾಧ್ಯತೆ ಕಡಿಮೆ ಇದ್ದು, ಸೆಪ್ಟೆಂಬರ್ 10ರಂದು ಕರಾವಳಿ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಕ್ಷೀಣ
ಸಾಂದರ್ಭಿಕ ಚಿತ್ರ
Image Credit source: tv9

Updated on: Sep 09, 2026 | 7:12 AM

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲ
  • ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 9: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಸೆಪ್ಟೆಂಬರ್ 9ರಂದು ಕರಾವಳಿ ಕರ್ನಾಟಕದ ಕೆಲವೆಡೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಆದರೆ, ಸೆಪ್ಟೆಂಬರ್ 10ರಂದು ಕರಾವಳಿ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಇರಲಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 9ರಂದು ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಸೆಪ್ಟೆಂಬರ್ 10ರಂದು ಕರಾವಳಿಯಲ್ಲಿ ಮಳೆ

ಸೆಪ್ಟೆಂಬರ್ 10ರಂದು ಕರಾವಳಿ ಕರ್ನಾಟಕದಲ್ಲಿ ಮಳೆ ತುಸು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಮಳೆಯಾಗುತ್ತಾ?

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸೆಪ್ಟೆಂಬರ್ 10ರಂದು ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಮಿಂಚಿನೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಮಂಗಳವಾರ ಸಂಜೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಾಖಲಾಗಿರುವ ಪ್ರಮುಖ ಮಳೆ ಪ್ರಮಾಣ ಹೀಗಿದೆ;

  • ಮಂಕಿ, ಉತ್ತರ ಕನ್ನಡ: 3 ಸೆಂ.ಮೀ.
  • ಗದಗ ಪಿಬಿಒ ವೀಕ್ಷಣಾಲಯ: 2 ಸೆಂ.ಮೀ.
  • ವಿಜಯಪುರ ಪಿಟಿಒ: 2 ಸೆಂ.ಮೀ.
  • ಹೊನ್ನಾವರ ವೀಕ್ಷಣಾಲಯ, ಉತ್ತರ ಕನ್ನಡ: 1 ಸೆಂ.ಮೀ.
  • ಔರಾದ್, ಬೀದರ್: 1 ಸೆಂ.ಮೀ.
  • ಹಿಡಕಲ್ ಡ್ಯಾಂ, ಬೆಳಗಾವಿ: 1 ಸೆಂ.ಮೀ.
  • ಕುರ್ಡಿ, ರಾಯಚೂರು: 1 ಸೆಂ.ಮೀ.

ಒಟ್ಟಾರೆ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದರೂ, ಸೆಪ್ಟೆಂಬರ್ 10ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us