Karnataka Weather Forecast: ಬೆಂಗಳೂರು ಸೇರಿ ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್
Karnataka Weather: ರಾಜ್ಯಾದ್ಯಂತ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ಮಳೆ ಇರಲಿದೆ.ಬೆಂಗಳೂರಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಅಕ್ಟೋಬರ್ 14: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ (Rain) ಇರಲಿದೆ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ ಜಿಲ್ಲೆಗಳಲ್ಲಿರಲಿದೆ ವರುಣನ ಆರ್ಭಟ?
ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಮನದ ಸಾಧ್ಯತೆ ಇದ್ದು, ಶೇಕಡಾ 86ರಿಂದ 100ರಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:34 am, Tue, 14 October 25
