AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​; ಮಡಿಕೇರಿಯ ಬೆಂಗೂರಿನಲ್ಲಿ ದಾಖಲೆಯ ಮಳೆ

Monsoon 2026: ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ 7 ಜಿಲ್ಲೆಗಳಿಗೆ ಜುಲೈ 9ರಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗು ಜಿಲ್ಲೆಯ ಬೆಂಗೂರಿನಲ್ಲಿ ದಾಖಲೆಯ 211.5 ಮಿ.ಮೀ ಮಳೆ ಸುರಿದಿದೆ. ಈ ನಡುವೆ ಜುಲೈ 2ನೇ ವಾರದಲ್ಲಿ ಮುಂಗಾರು ಮಳೆ ಕ್ಷೀಣಿಸುವ ಸಾಧ್ಯತೆ ಇದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Forecast: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​; ಮಡಿಕೇರಿಯ ಬೆಂಗೂರಿನಲ್ಲಿ ದಾಖಲೆಯ ಮಳೆ
ಮಳೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Jul 08, 2026 | 6:10 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಕಡಿಮೆಯಾಗಲಿದ್ಯಾ ಮುಂಗಾರು ಮಳೆ ಆರ್ಭಟ?
  • ಕೇವಲ ಬೆರಳೆಣಿಕೆಯ ಜಿಲ್ಲೆಗಳಲ್ಲಿ ಮಾತ್ರ ನಾಳೆ ಮಳೆ ಮುನ್ಸೂನೆ
  • ಕೊಡಗು ಜಿಲ್ಲೆಯ ಬೆಂಗೂರಲ್ಲಿ ಸುರಿದಿರುವ ದಾಖಲೆಯ ಮಳೆ

ಬೆಂಗಳೂರು, ಜುಲೈ 08: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿದ್ದ ವರುಣನ ಆರ್ಭಟ ಕಡಿಮೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್​​ ತಿಂಗಳಿನಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗಿಲ್ಲವಾಗಿತ್ತಾದರೂ ಜುಲೈ ಆರಂಭದಿಂದ ಹಲವೆಡೆ ಉತ್ತಮ ಮಳೆಯಾಗಿತ್ತು. ಆದರೆ ಜುಲೈ 2ನೇ ವಾರದಿಂದ ಮತ್ತೆ ಮುಂಗಾರು ಮಳೆಯ ಚಟುವಟಿಕೆಗಳು ಕ್ಷೀಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಕೇವಲ ಬೆರಳೆಣಿಕೆಯ ಜಿಲ್ಲೆಗಳಲ್ಲಿ ಮಾತ್ರ ನಾಳೆ (ಜುಲೈ 9)ರಂದು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವೆಡೆ ಭಾರಿ ಮಳೆಯನ್ನು ನಿರಿಕ್ಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50-60 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ವರ್ಷಧಾರೆಯ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಮೈಸೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತುಂರುರು ಮಳೆಯ ಸಾಧ್ಯತೆ ಬಗ್ಗೆ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 8ರ ನೀರಿನ ಮಟ್ಟದ ವಿವರ

ಕೊಡಗು ಜಿಲ್ಲೆಯ ಬೆಂಗೂರಲ್ಲಿ ದಾಖಲೆ ಮಳೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಂಗೂರಿನಲ್ಲಿ ನಿನ್ನೆ ದಾಖಲೆಯ ಅಂದರೆ, 211.5 ಮಿ.ಮೀ. ಮಳೆ ಸುರಿದಿದೆ. ನಂತರ ಸ್ಥಾನಗಳಲ್ಲಿ ಶಿವಮೊಗ್ಗದ ತೀರ್ಥಹಳ್ಳಿಯ ಹೊನ್ನೆತಾಳುವಿನಲ್ಲಿ 199.5 ಮಿ.ಮೀ., ಚಿಕ್ಕಮಗಳೂರಿನ ಕೊಪ್ಪದ ಕಮ್ಮರಡಿಯಲ್ಲಿ 194 ಮಿ.ಮೀ., ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ 179.5 ಮಿ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿಯ ಮಲವಂತಿಗೆಯಲ್ಲಿ 165.5 ಮಿ.ಮೀ., ಸಕಲೇಶಪುರದ ಹೊಗಲಹಳ್ಳ ಅಥವಾ ಹೊಂಗಡಹಳ್ಳದಲ್ಲಿ 163.5 ಮಿ.ಮೀ. ಮತ್ತು ಉಡುಪಿಯ ಕುಂದಾಪುರದ ಮಡಾಮಕ್ಕಿಯಲ್ಲಿ 124.5 ಮಿ.ಮೀ. ಮಳೆ ಸುರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ