Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ವರುಣನ ಆಗಮನವಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಇನ್ನೂ ಕೆಲವೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ
ಮಳೆ
Image Credit source: Mint

Updated on: May 05, 2024 | 8:00 AM

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್​ನಗರದಲ್ಲಿ ಮಳೆಯಾಗಿದೆ.
ಕಲಬುರಗಿ ಹಾಗೂ ರಾಯಚೂರಿನಲ್ಲಿ 44.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 41.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 44.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us