Karnataka Weather Update: ಏಪ್ರಿಲ್​- ಜೂನ್​ ತನಕ ರಾಜ್ಯದ ಹಲವೆಡೆ ತಾಪಮಾನ ಏರಿಕೆ, 2 ರಿಂದ 8 ದಿನ ಉಷ್ಣ ಅಲೆ ಬೀಸುವ ಸಂಭವ

ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಇತ್ತೀಚಿನ ವರದಿ ಪ್ರಕಾರ ಏಪ್ರಿಲ್ ಮತ್ತು ಜೂನ್ ನಡುವೆ ದೇಶದ ಹಲವೆಡೆ ತೀವ್ರ ಶಾಖ ಸೃಷಿಯಾಗಲಿದೆ, ಈ ಸಮಯದಲ್ಲಿ ಶಾಖದ ಅಲೆಯು ಸುಮಾರು 10 ರಿಂದ 20 ದಿನಗಳವರೆಗೆ ಇರುತ್ತದೆ. ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ, ಆಂಧ್ರಪ್ರದೇಶದಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮಗಳನ್ನು ಕಾಣಬಹುದು ಎಂದು ಎಚ್ಚರಿಕೆ‌ ನೀಡಿದೆ.

Karnataka Weather Update: ಏಪ್ರಿಲ್​- ಜೂನ್​ ತನಕ ರಾಜ್ಯದ ಹಲವೆಡೆ ತಾಪಮಾನ ಏರಿಕೆ, 2 ರಿಂದ 8 ದಿನ ಉಷ್ಣ ಅಲೆ ಬೀಸುವ ಸಂಭವ
ತಾಪಮಾನ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ವಿವೇಕ ಬಿರಾದಾರ

Updated on: Apr 02, 2024 | 7:24 AM

ದೇಶಾದ್ಯಂತ ಲೋಕಸಭಾ‌ ಚುನಾವಣಾ (Lok Sabha Election) ಅಖಾಡ ರಂಗೇರುತ್ತಿದೆ. ಮೊದಲ ಹಂತದ ಮತದಾನ ಏಪ್ರೀಲ್ 19 ರಂದು ನಡೆಯಲಿದ್ದು ಭರ್ತಿ ಎರಡು ತಿಂಗಳಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ ಚುನಾವಣಾ ಆಯೋಗಕ್ಕೆ‌ ಭಾರತೀಯ ಹವಾಮಾನ ಇಲಾಖೆ (India Meteorological Department) ಬಿರು ಬಿಸಿಗಾಳಿಯ ಎಚ್ಚರಿಕೆ‌ ನೀಡಿದೆ. ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಸಾರ್ವತ್ರಿಕ ಚುನಾವಣೆ ಪ್ರಚಾರಕ್ಕೆ ತೀವ್ರ ಬಿಸಿಗಾಳಿ ಮಾರಕವಾಗಬಹುದು ಎಂದು ಚುನಾವಣಾ ಆಯೋಗಕ್ಕೆ‌ ಹವಮಾನ ಇಲಾಖೆ‌ ಮುನ್ಸೂಚನೆ‌ ನೀಡಿದೆ. ಏಪ್ರಿಲ್​ನಿಂದ ಜೂನ್​ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ (Summer) ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ.

ಕರ್ನಾಟಕವು ಏಪ್ರಿಲ್​ನಲ್ಲಿ ಸಾಮಾನ್ಯದ 1 ರಿಂದ 3 ದಿನಗಳ ಬದಲು 2 ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲು ಸೀಮೆಯ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆ ಬೀಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ದೇಶಾದ್ಯಂತ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಚ್ವರಿಕೆ ವಹಿಸುವಂತೆ ಸೂಚನೆ‌‌ ನೀಡಿದೆ.

ಇದನ್ನೂ ಓದಿ: World Air Quality report: ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ

ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಇತ್ತೀಚಿನ ವರದಿ ಪ್ರಕಾರ ಏಪ್ರಿಲ್ ಮತ್ತು ಜೂನ್ ನಡುವೆ ದೇಶದ ಹಲವೆಡೆ ತೀವ್ರ ಶಾಖ ಸೃಷಿಯಾಗಲಿದೆ, ಈ ಸಮಯದಲ್ಲಿ ಶಾಖದ ಅಲೆಯು ಸುಮಾರು 10 ರಿಂದ 20 ದಿನಗಳವರೆಗೆ ಇರುತ್ತದೆ. ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ, ಆಂಧ್ರಪ್ರದೇಶದಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮಗಳನ್ನು ಕಾಣಬಹುದು ಎಂದು ಎಚ್ಚರಿಕೆ‌ ನೀಡಿದೆ.

ಭಾರತದಲ್ಲಿ ಏಪ್ರಿಲ್ 19 ಮತ್ತು ಜೂನ್ 1 ರ ನಡುವೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಮಧ್ಯಾಹ್ನದ ಸಮಯದಲ್ಲಿ ಸಾರ್ವಜನಿಕ‌ ಸಮಾವೇಶ ಹಾಗೂ ರೋಡ್ ಶೋ ಪ್ರಚಾರ ಮಾಡುವುದನ್ನು ರಾಜಕೀಯ ಪಕ್ಷಗಳು ಮೊಟಕುಗೊಳಿಸಬೇಕಾಗುತ್ತೆ. ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಚುನಾವಣೆ ಆಯೋಗವೇ ಸಮಾವೇಶ, ರೋಡ್ ಶೋಗಳಿಗೆ ಪ್ರಚಾರದ ಸಮಯ ನಿಗದಿ ಮಾಡಿದರೂ ಅಚ್ವರಿಯಿಲ್ಲ.

ಮಾರ್ಚ್​ನಲ್ಲಿ ಬಾರದ ಮಳೆ

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಾರ್ಚ್​​ ತಿಂಗಳ ಮಧ್ಯಭಾಗದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿತ್ತು. ಆದರೆ ಬೆಳಗಾವಿ, ಕೊಡಗು ಮತ್ತು ವಿಜಯಪುರದ ಕೆಲ ಭಾಗಗಳನ್ನು ಹೊರತುಪಡಿಸಿ, ಉಳಿದಡೆ ಮಳೆಯಾಗಿಲ್ಲ. ಬೆಂಗಳೂರಿನಲ್ಲಿಯೇ ಮಾರ್ಚ್​ ತಿಂಗಳಲ್ಲಿ 14.7 ಮಿಮೀನಷ್ಟು ಮಳೆಯಾಗಲಿದೆ ಎಂಬ ವರದಿಯಾಗಲಿದೆ ಎಂಬ ವರದಿಯಿತ್ತು. ಆದರೆ ಇಂದು ಹನಿಯೂ ಮಳೆ ಬೀಳಲಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ