AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.ಚಾಮರಾಜನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ, ಯೆಲ್ಲೋ ಅಲರ್ಟ್​
ಬೇಸಿಗೆ Image Credit source: Zee Business
ನಯನಾ ರಾಜೀವ್
|

Updated on:Feb 27, 2025 | 7:22 AM

Share

ಬೆಂಗಳೂರು, ಫೆಬ್ರವರಿ 27:   ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ(Heat Wave) ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬರಲಿದೆ.

ಚಾಮರಾಜನಗರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇತ್ತು, ಬೀದರ್, ವಿಜಯಪುರ, ಗದಗ, ಹಾವೇರಿ, ರಾಯಚೂರು, ಧಾರವಾಡ, ದಕ್ಷಿಣ ಒಳನಾಡಿನ ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇತ್ತು. ಕಳೆದ 24 ಗಂಟೆಗಳಲ್ಲಿ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ -2.6 ರಷ್ಟು ಕುಸಿತವಾಗಿದೆ.

ಮತ್ತಷ್ಟು ಓದಿ: Karnataka Weather: ಹೊನ್ನಾವರದಲ್ಲಿ ಅತ್ಯಂತ ಗರಿಷ್ಠ ತಾಪಮಾನ, ಈ ಮೂರು ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ

ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್​, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್, ರಾಯಚೂರು, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ, ಹಾಸನ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ 31-33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಬೆಳಗಿನ ಜಾವ ತಂಪಾದ ಗಾಳಿ ಬೀಸುತ್ತಿತ್ತು, ಗರಿಷ್ಠ ತಾಪಮಾನ ಕೊಂಚ ಕಡಿಮೆಯಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Thu, 27 February 25

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!