Karnataka Weather: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ, ರೆಡ್​ ಅಲರ್ಟ್​

ಮನೆಯಲ್ಲಿದ್ದರೂ ಸೆಕೆ, ಹೊರಗಡೆ ಬಂದರೂ ಸೆಕೆ ಉಸಿರುಗಟ್ಟುವ ವಾತಾವರಣ, ಒಂದೆಡೆ ಧೂಳು ಮತ್ತೊಂದೆಡೆ ಕಾಲರಾ, ಟೈಫಾಯಿಡ್​ ರೀತಿಯ ಆರೋಗ್ಯ ಸಮಸ್ಯೆಗಳು ಕರ್ನಾಟಕದ ಜನತೆಯನ್ನು ಹೈರಾಣಾಗಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ವಿಪರೀತವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ, ರೆಡ್​ ಅಲರ್ಟ್​
Image Credit source: Deccan Herald

Updated on: May 02, 2024 | 7:36 AM

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 6ರಿಂದ ಮಳೆ, ಅಲ್ಲಿಯವರೆಗೆ ಒಣಹವೆ

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 41.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 am, Thu, 2 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us