AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಏಪ್ರಿಲ್ 2 ರಂದು ಕರ್ನಾಟಕದಲ್ಲಿ ತೀವ್ರ ಬಿಸಿಲು ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಒಣ ಹವಾಮಾನ (35-37°C) ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ 42°C ತಲುಪುವ ಸಾಧ್ಯತೆಯಿದ್ದು, ಮಧ್ಯಾಹ್ನ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ತೇವಾಂಶ ಹೆಚ್ಚಿದ್ದು, ಮಲೆನಾಡಿನಲ್ಲಿ ತುಂತುರು ಮಳೆಯ ಮುನ್ಸೂಚನೆಯಿದೆ. ಮಧ್ಯಾಹ್ನ ಮನೆಯಿಂದ ಹೊರಬರದಂತೆ ಸಲಹೆ ನೀಡಲಾಗಿದೆ.

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 02, 2026 | 6:18 AM

Share

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಖೆ ಮತ್ತು ಹಬೆ (Humidity) ಹೆಚ್ಚಿರಲಿದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು (42°C ಸಂಭವನೀಯ) ಗರಿಷ್ಠ ಉಷ್ಣಾಂಶ ಇರಲಿದೆ ಎಂದು ಹೇಳಲಾಗಿದೆ. ಮಲೆನಾಡು ಭಾಗದಲ್ಲಿ (20°C – 22°C) ಕನಿಷ್ಠ ಉಷ್ಣಾಂಶ ಇರಲಿದೆ. ಇನ್ನು ಇಲಾಖೆ ಹೇಳಿರುವಂತೆ ಉತ್ತರ ಕರ್ನಾಟಕದ ಜನರಿಗೆ ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಇಲ್ಲಿದೆ ನೋಡಿ: 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಕರಾವಳಿಯಲ್ಲಿ ಬಿಸಿಲಿಗಿಂತಲೂ ಸೆಖೆ ಮತ್ತು ಹಬೆ ಜನರನ್ನ ಹೆಚ್ಚು ಕಾಡಲಿದೆ. ಗರಿಷ್ಠ 33°C – 35°C, ಆದರೆ ಅನುಭವಕ್ಕೆ ಬರುವ ತಾಪಮಾನ (Feels like) 38°C ದಾಟಬಹುದು. ಕಡಲತೀರದ ಭಾಗಗಳಲ್ಲಿ ಸಂಜೆ ವೇಳೆ ತಂಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು ಭಾಗದಲ್ಲಿ ಒಣ ಹವಾಮಾನವಿದ್ದರೂ, ಸಂಜೆಯ ವೇಳೆಗೆ ತುಸು ತಂಪು ವಾತಾವರಣವಿರಲಿದೆ. ದಿನವಿಡೀ ಬಿಸಿಲು, ಸಂಜೆ ಭಾಗಶಃ ಮೋಡ ಕವಿದ ವಾತಾವರಣ. ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ. ಉತ್ತರ ಕರ್ನಾಟಕ (ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ) ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಇಲ್ಲಿ ದಾಖಲಾಗುತ್ತಿದೆ. ಇಲ್ಲಿ ತಪಮಾನ ಗರಿಷ್ಠ 39°C ನಿಂದ 42°C ವರೆಗೆ ಏರಿಕೆಯಾಗುವ ಸಂಭವವಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಬಿಸಿಲಿಗೆ ಮೈಯೊಡ್ಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!