Karnataka Rains: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ

ಮುಂಗಾರು ಶುರುವಾಗಿದೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ರೆಡ್​ ಅಲರ್ಟ್​ ಘೋಷಣೆ
ಮಳೆImage Credit source: Jagaranjosh.com
Follow us
|

Updated on: Jun 10, 2024 | 7:52 AM

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹಾವೇರಿ, ಶಿವಮೊಗ್ಗಕ್ಕೆ ಆರೆಂಜ್​ ಅಲರ್ಟ್​, ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಗೇರುಸೊಪ್ಪ, ಕಾರವಾರ, ಕೋಟ, ಕ್ಯಾಸಲ್​ರಾಕ್, ಅಂಕೋಲಾದಲ್ಲಿ ಹೆಚ್ಚು ಮಳೆಯಾಗಿದೆ.

ಗೋಕರ್ಣ, ಕದ್ರಾ, ಶಿರಾಲಿ, ಆಲಮಟ್ಟಿ, ಆಗುಂಬೆ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಮಂಕಿ, ಕುಂದಾಪುರ, ಬೆಳಗಾವಿ, ಪಣಂಬೂರು, ಮುಲ್ಕಿ, ಪುತ್ತೂರು, ನಿಪ್ಪಾಣಿ, ತಾಳಗುಪ್ಪದಲ್ಲಿ ಮಳೆಯಾಗಿದೆ. ಉಡುಪಿ, ತಾಳಿಕೋಟೆ, ಬಿಳಗಿ, ಶೃಂಗೇರಿ, ಭಾಗಮಂಡಲ, ಸುಳ್ಯ, ಉಪ್ಪಿನಂಗಡಿ, ಮಂಗಳೂರು, ಮಾಣಿ, ಸೇಡಬಾಳ, ಬಾಳೆಹೊನ್ನೂರು, ಜಯಪುರ, ಚಿಕ್ಕೋಡಿ, ಬೆಳ್ತಂಗಡಿ, ಕಳಸ, ಜೋಯಿಡಾ, ಸಿದ್ದಾಪುರ, ಕಿರವತ್ತಿ, ಜೇವರ್ಗಿ, ಯಲ್ಲಾಪುರ, ಕೊಪ್ಪ, ಅಣ್ಣಿಗೆರೆ, ಧಾರವಾಡ, ಗೋಕಾಕ,ಸವಣೂರು, ಬೈಲಹೊಂಗಲ, ಸೇಡಂ, ಎಚ್​ಡಿ ಕೋಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್​ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಲಬುರಗಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ28.9 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 28.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ