ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.
ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾವೇರಿ, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಗೇರುಸೊಪ್ಪ, ಕಾರವಾರ, ಕೋಟ, ಕ್ಯಾಸಲ್ರಾಕ್, ಅಂಕೋಲಾದಲ್ಲಿ ಹೆಚ್ಚು ಮಳೆಯಾಗಿದೆ.
ಗೋಕರ್ಣ, ಕದ್ರಾ, ಶಿರಾಲಿ, ಆಲಮಟ್ಟಿ, ಆಗುಂಬೆ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಮಂಕಿ, ಕುಂದಾಪುರ, ಬೆಳಗಾವಿ, ಪಣಂಬೂರು, ಮುಲ್ಕಿ, ಪುತ್ತೂರು, ನಿಪ್ಪಾಣಿ, ತಾಳಗುಪ್ಪದಲ್ಲಿ ಮಳೆಯಾಗಿದೆ. ಉಡುಪಿ, ತಾಳಿಕೋಟೆ, ಬಿಳಗಿ, ಶೃಂಗೇರಿ, ಭಾಗಮಂಡಲ, ಸುಳ್ಯ, ಉಪ್ಪಿನಂಗಡಿ, ಮಂಗಳೂರು, ಮಾಣಿ, ಸೇಡಬಾಳ, ಬಾಳೆಹೊನ್ನೂರು, ಜಯಪುರ, ಚಿಕ್ಕೋಡಿ, ಬೆಳ್ತಂಗಡಿ, ಕಳಸ, ಜೋಯಿಡಾ, ಸಿದ್ದಾಪುರ, ಕಿರವತ್ತಿ, ಜೇವರ್ಗಿ, ಯಲ್ಲಾಪುರ, ಕೊಪ್ಪ, ಅಣ್ಣಿಗೆರೆ, ಧಾರವಾಡ, ಗೋಕಾಕ,ಸವಣೂರು, ಬೈಲಹೊಂಗಲ, ಸೇಡಂ, ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ, ರೆಡ್ ಅಲರ್ಟ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಲಬುರಗಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ28.9 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 28.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ