Karnataka Weather: ಕರ್ನಾಟಕದ ಹಲವೆಡೆ ಭಾರಿ ಮಳೆ..! ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ
Bangalore Weather: ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರು ಮಹಾನಗರದಲ್ಲಿ ಗಾಳಿ ಸಹಿತ ಮಳೆ ಸುರಿಯಲಾರಂಭಿಸಿದೆ. ನಗರದ ಕೋರಮಂಗಲ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಇತರ ಭಾಗಗಳಲ್ಲಿ ಮಳೆಯಾಗುತ್ತಿದೆ.
ಬೆಂಗಳೂರು: ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರು ಮಹಾನಗರದಲ್ಲಿ ಗಾಳಿ ಸಹಿತ ಮಳೆ ಸುರಿಯಲಾರಂಭಿಸಿದೆ. ನಗರದ ಕೋರಮಂಗಲ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಇತರ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಕಾಲಿಕ ಮಳೆಯಿಂದಾಗಿ ನಗರದ ಹಲವೆಡೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ ನಗರದಲ್ಲಿ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ನಲ್ಲಿ ನರಳುತ್ತಿದ್ದಾರೆ. ಬೆಂಗಳೂರಿನಲ್ಲಿ ನಾಳೆಯೂ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲೂ ನಿನ್ನೆಯಿಂದ ಬಾರಿ ಮಳೆ ಸುರಿಯುತ್ತಿದ್ದು, ಕೋಟೆ ನಾಡು ಚಿತ್ರದುರ್ಗ ಅಕ್ಷರಶಃ ಬೆಚ್ಚಿಬಿದ್ದಿದೆ. ಬರದ ನಾಡಿನಲ್ಲಿ ಅಕಾಲಿಕ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಫಸಲು ಮಣ್ಣು ಪಾಲಾಗುತ್ತಿರುವುದನ್ನು ಕಂಡು ಆ ಭಾಗದ ರೈತರಲ್ಲಿ ಆತಂಕ ಶುರುವಾಗಿದೆ. ರಸ್ತೆಗಳೆಲ್ಲಾ ನೀರಿನಿಂದ ತುಂಬಿ ಹೋಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.
ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ವೇಗವಾದ ಗಾಳಿ ಜೊತೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕೆಳಗೆ ನೀಡಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ತಿಳಿಸಿದೆ.
ಹವಾಮಾನ ಇಲಾಖೆ ಹೆಸರಿಸಿರುವ ಜಿಲ್ಲೆಗಳು.. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ತುಮಕೂರು, ಕೊಡಗು, ಚಾಮರಾಜನಗರ, ಮೈಸೂರು
ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ, ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ