AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್​​ ಘೋಷಣೆ

ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Karnataka Weather: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್​​ ಘೋಷಣೆ
ಮಳೆ
ವಿವೇಕ ಬಿರಾದಾರ
|

Updated on:Jul 17, 2023 | 7:36 AM

Share

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ (Coastal) ಜಿಲ್ಲೆಗಳಾದ ದಕ್ಷಿಣ ಕನ್ನಡ (Dakshin Kannada), ಉಡುಪಿ (Udupi) ಮತ್ತು ಉತ್ತರ ಕನ್ನಡ (Uttar Kannada) ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain)  ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ನಾಲ್ಕು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಈ ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಆದರೆ ಬೆಳಗಾವಿ, ಬೀದರ ಮತ್ತು ಕಲಬುರಗಿ ಜಿಲ್ಲೆಗಳಿಗೆ ದಿನಾಂಕ ಜು. 19 ಮತ್ತು 20 ರಂದು ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: ಈ ಮಳೆಗಾಲದ ಆಹಾರ ಮಾರ್ಗದರ್ಶಿಯೊಂದಿಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ

ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನಾಂಕ ಜು.20 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ಆದರೆ ಇದು ಕಷ್ಟ ಸಾಧ್ಯ. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಕೇವಲ ಶೇಕಡಾ 25ರಷ್ಟು ಮಾತ್ರವಿದೆ. ಹೀಗಾಗಿ ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Mon, 17 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ