AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ಶುಕ್ರವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ.

Karnataka Weather: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Sep 30, 2023 | 7:44 AM

Share

ರಾಜ್ಯದಲ್ಲಿ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಸಂಚಿತ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೆ.30) ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಿದ್ದಾರೆ.

ಉತ್ತರ ಒಳನಾಡು ಬೆಳಗಾವಿ ಮತ್ತು ಬೀದರ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಸೆ.30ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ದಕ್ಷಿಣ ಒಳನಾಡು ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಅಧಿಕ ಮಳೆಯಾಗಲಿದೆ. ಇನ್ನು ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕುರು, ವಿಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಶುಕ್ರವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ