Karnataka Weather ಮೇ 6ರ ವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆ
Weather Forecast ಮೇ 5 ಮತ್ತು 6 ರಂದು ಕೇರಳದಲ್ಲಿ ಭಾರಿ ಮಳೆಯಾಗಲಿದ್ದು, ಮೇ 4 ರಿಂದ ಮೇ 6ರ ವರೆಗೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗಲಿದೆ. ಮತ್ತು ಕರಾವಳಿ ಕರ್ನಾಟಕದಲ್ಲಿ ಮೇ 20, 2021 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ದೆಹಲಿ: ಮುಂದಿನ ದಿನಗಳಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ. ಮೇ 5 ಮತ್ತು 6 ರಂದು ಕೇರಳದಲ್ಲಿ ಭಾರಿ ಮಳೆಯಾಗಲಿದ್ದು, ಮೇ 4 ರಿಂದ ಮೇ 6ರ ವರೆಗೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗಲಿದೆ. ಮತ್ತು ಕರಾವಳಿ ಕರ್ನಾಟಕದಲ್ಲಿ ಮೇ 20, 2021 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಮೇ 2, 2021 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪಶ್ಚಿಮ ಕರಾವಳಿಯಲ್ಲಿ ಮತ್ತು ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕ, ಲಕ್ಷದ್ವೀಪದ ಕರಾವಳಿ ಪ್ರದೇಶಗಳಲ್ಲಿ ಅಲೆಗಳು ಹೆಚ್ಚಾಗಲಿವೆ. ಹಾಗೂ ಸಮುದ್ರ ತಡದಲ್ಲಿ ಪರಿಸ್ಥಿತಿ ಭೀಕರವಾಗಲಿದ್ದು. ಈ ಪ್ರದೇಶಗಳಲ್ಲಿ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.
ದಕ್ಷಿಣ ತಮಿಳುನಾಡು ಮತ್ತು ನೆರೆಹೊರೆಯ ಮೇಲೆ ಚಂಡಮಾರುತದ ಪ್ರಭಾವದಿಂದಾಗಿ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ. ಹಾಗೂ ಮೇ 6 ರವರೆಗೆ ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳಲ್ಲಿ ದೇಶದ ಯಾವುದೇ ಭಾಗದಲ್ಲಿ ಯಾವುದೇ ಶಾಖದ ಅಲೆ ಉಂಟಾಗುವುದಿಲ್ಲ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ವಾಯುವ್ಯ ಮಧ್ಯಪ್ರದೇಶದ ಚಂಡಮಾರುತದ ಪ್ರಭಾವದಿಂದ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮುಂದಿನ 5 ದಿನಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದ ಉಳಿದ ಭಾಗಗಳಿಗೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು ಬಿಸಿಲು: ನಗರದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಉಷ್ಣಾಂಶ ದಾಖಲು