AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ನವೆಂಬರ್ 4ರಿಂದ 7ರವರೆಗೆ ದಕ್ಷಿಣ ಒಳನಾಡಿನ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ನವೆಂಬರ್ 4ರಿಂದ 7ರವರೆಗೆ ದಕ್ಷಿಣ ಒಳನಾಡಿನ ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Popular Mechanics
ನಯನಾ ರಾಜೀವ್
|

Updated on:Nov 02, 2023 | 7:28 AM

Share

ಕರ್ನಾಟಕದಾದ್ಯಂತ ಹಲವೆಡೆ ಚಳಿ ಶುರುವಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಗೋಕರ್ಣ, ಸಿದ್ದಾಪುರ, ಕುಮಟಾ, ಗೇರುಸೊಪ್ಪ, ಯಲ್ಲಾಪುರ, ಹಳಿಯಾಳ, ಸುಳ್ಯ, ಧಾರವಾಡ, ಲಿಂಗನಮಕ್ಕಿ, ಹುಬ್ಬಳ್ಳಿ, ಲೋಂಡಾ, ಕಮ್ಮರಡಿ, ಕೊಪ್ಪ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ವಿಜಯಪುರದಲ್ಲಿ 16.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಕವಿದ ವಾತಾವರಣವಿದೆ, ಮುಂದಿನ ಒಂದೆರಡು ದಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ, ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Published On - 7:28 am, Thu, 2 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ