Karnataka Weather: ಮುಂದಿನ 5 ದಿನಗಳ ಕಾಲ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Weather: ಮುಂದಿನ 5 ದಿನಗಳ ಕಾಲ ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ಮಳೆ
ಮಳೆImage Credit source: Indian Express
Follow us
|

Updated on: Apr 23, 2023 | 8:44 AM

ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ ಮತ್ತು ಗದಗದಲ್ಲಿ ಮಳೆಯಾಗಲಿದ್ದು, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಇರಲಿದ್ದು, ಸಂಜೆ ಅಥೌಆ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಹಲವೆಡೆ ಗುಡುಗು ಸಹಿತ ಭಾರೀ ಮಳೆ, ರೈತರ ಮುಖದಲ್ಲಿ ಮಂದಹಾಸ

ಚಿಕ್ಕನಹಳ್ಳಿ ಎಡಬ್ಲ್ಯೂಎಸ್​, ಕುಂದಗೋಳ, ದೊಡ್ಡಬಳ್ಳಾಪುರ, ಕನಬರ್ಗಿ, ಚಿಂಚೋಳಿ, ಪಾವಗಡ, ಗೌರಿಬಿದನೂರು, ಯುಗಟಿ, ಭಾಗಮಂಡಲ, ಬೆಳಗಾವಿ ವಿಮಾನ ನಿಲ್ದಾಣ, ಗುತ್ತಲ್, ರಾಣೆಬೆನ್ನೂರು, ಬಸವನ ಬಾಗೇವಾಡಿ, ಬಂಡೀಪುರ, ಹುಣಸೂರು, ಶಿವಮೊಗ್ಗ, ಬುಕ್ಕಾಪಟ್ಟಣ, ಕುಣಿಗಲ್, ಉಚ್ಚಂಗಿದುರ್ಗದಲ್ಲಿ ಮಳೆಯಾಗಿದೆ.2/ 7 ಕೆಲವು ಕಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಹಗುರ ಮಳೆಯಾಗುತ್ತಿದೆ. ಈಗ ಮಳೆಯ ಪ್ರಮಾಣ ಕೊಂಚ ಏರಿಕೆಯಾಗಲಿದೆ.

ಶನಿವಾರ ಕೊಡಗು, ಶಿವಮೊಗ್ಗ ಹಾಗೂ ಹಾಸನ ಭಾಗದಲ್ಲಿ ಸಣ್ಣ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ವ್ಯಾಪ್ತಿಯಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕೆಲವು ಕಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಹಗುರ ಮಳೆಯಾಗುತ್ತಿದೆ. ಈಗ ಮಳೆಯ ಪ್ರಮಾಣ ಕೊಂಚ ಏರಿಕೆಯಾಗಲಿದೆ. ಉತ್ತರ ಒಳನಾಡಿದ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಕೊಪ್ಪಳ, ಗದಗ ಭಾಗದಲ್ಲಿ ಮಳೆಯಾಗಲಿದ್ದು, ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ