Karnataka Weather: ಬೆಂಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ
ಬೆಂಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹಾಸನದಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ
ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ