Karnataka Weather: ಮುಂದಿನ 2 ದಿನ ಬೆಂಗಳೂರು ಸೇರಿ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ. ಮುಂದಿನ 48 ಗಂಟೆಗಳಲ್ಲಿ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ಕೊಡಗು, ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಗುಬ್ಬಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರಿನ ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸ್ವಲ್ಪ ಬಿಸಿಲಿನ ಪ್ರಮಾಣ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಕಾರಣ ಬೆಂಗಳೂರು ಸೇರಿ ರಾಜ್ಯದ ಹಲವಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 25ರ ತನಕ ಗುಡುಗು ಸಹಿತ ಮಳೆಯಾಗಬಹುದೆಂಬ ಅಲರ್ಟ್ ನೀಡಿದ್ದು, ರಾಜ್ಯದಲ್ಲಿ ಬಿಸಿಲಿನ ತಾಪಮಾನವೂ ಇಳಿಕೆಯಾಗಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ