ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 38.3 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.5 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Bengaluru Rains: ಬೆಂಗಳೂರಿನಲ್ಲಿ ಬಿಸಿಲ ಝಳದ ಮಧ್ಯೆ ಮಳೆಯ ಸಿಂಚನ, ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ
ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ, ಇನ್ನೆರಡು ದಿನಗಳಲ್ಲಿ ಸಂಜೆ ಅಥವಾ ರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ 26 ಮತ್ತು 27ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ