Karnataka Rain: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ

|

Updated on: Nov 24, 2023 | 7:35 AM

ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

Karnataka Rain: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆ
Image Credit source: The Economic Times
Follow us on

ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

ತೊಂಡೆಭಾವಿ, ಧರ್ಮಸ್ಥಳ, ಸೋಮವಾರಪೇಟೆ, ವಿರಾಜಪೇಟೆ, ಗೌರಿಬಿದನೂರು, ಅರಕಲಗೂಡು, ಬಂಡೀಪುರ, ಕೊಣನೂರು, ಕುಣಿಗಲ್​ನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರವರೆಗೆ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ