ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ:Heatwave Alert: ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ತಾಪಮಾನ 4 ಡಿಗ್ರಿಗಳಷ್ಟು ಹೆಚ್ಚುವ ಸಾಧ್ಯತೆ
ಮುಂಬರುವ ಮಾನ್ಸೂನ್ ದೀರ್ಘಾವಧಿಯ ಸರಾಸರಿಯ 94 ಪ್ರತಿಶತದಷ್ಟು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಸ್ಕೈಮೆಟ್ ನಿರೀಕ್ಷಿಸುತ್ತದೆ ಎಂದು ಸಂಸ್ಥೆ ಹೇಳಿದೆ. ಈ ಮೂಲಕ ದೇಶದಲ್ಲಿ ಶೇಕಡಾ 20ರಷ್ಟು ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಎಚ್ಚರಿಕೆ ನೀಡಿದೆ.
ಪ್ರತಿ ವರ್ಷಕ್ಕಿಂತ ಹೆಚ್ಚು ಮಳೆಯಾಗಲು ಶೇಕಡಾ 110ರಷ್ಟು ಮಳೆ ಆಗಲೇಬೇಕು. ಆದರೆ ಇದು ಕಷ್ಟ ಸಾಧ್ಯ. ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆ ಕೇವಲ ಶೇಕಡಾ 25ರಷ್ಟು ಮಾತ್ರವಿದೆ. ಹೀಗಾಗಿ ಬರಗಾಲ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ