Karnataka Weather Updates: ಕರ್ನಾಟಕದ ವಿವಿಧೆಡೆ ಡಿಸೆಂಬರ್ 9 ರಿಂದ 11ರವರೆಗೂ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ 11ರವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ಕರ್ನಾಟಕದ ವಿವಿಧೆಡೆ ಡಿಸೆಂಬರ್ 9 ರಿಂದ 11ರವರೆಗೂ ಭಾರಿ ಮಳೆಯ ಮುನ್ಸೂಚನೆ
Rain
Follow us
TV9 Web
| Updated By: ನಯನಾ ರಾಜೀವ್

Updated on: Dec 07, 2022 | 6:00 AM

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ 11ರವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಡಿಸೆಂಬರ್ 10ರಂದು ದಕ್ಷಿಣ ಕನ್ನಡ ಉಡುಪಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಇನ್ನು ಡಿಸೆಂಬರ್ 11 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಾಗಲಕೋಟೆಯಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ