Karnataka Weather: ಒಂದೆಡೆ ಚಳಿ, ಬೆಂಗಳೂರು ಸೇರಿದಂತೆ ಹಲವೆಡೆ ಜನವರಿ 8ರವರೆಗೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಒಂದೆಡೆ ಚಳಿ ಮತ್ತೊಂದೆಡೆ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ಮುಂದಿನ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗಲಿದೆ.

Karnataka Weather: ಒಂದೆಡೆ ಚಳಿ, ಬೆಂಗಳೂರು ಸೇರಿದಂತೆ ಹಲವೆಡೆ ಜನವರಿ 8ರವರೆಗೆ ಮಳೆ ಸಾಧ್ಯತೆ
ಮಳೆ
Image Credit source: Business Standard

Updated on: Jan 02, 2024 | 7:33 AM

ರಾಜ್ಯದಲ್ಲಿ ಒಂದೆಡೆ ಚಳಿ ಮತ್ತೊಂದೆಡೆ ಮೋಡಕವಿದ ವಾತಾವರಣವಿದ್ದು, ಕೆಲವೆಡೆ ಮುಂದಿನ ನಾಲ್ಕೈದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಗದಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚುಮು ಚುಮು ಚಳಿ ನಡುವೆಯೇ ವರುಣನ ಆಗಮನ ಸಾಧ್ಯತೆ

ಬೆಂಗಳೂರು: 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಶಿವಮೊಗ್ಗ: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿ: 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರು: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us