AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ, ಒಣಹವೆ ಇದೆ.

Karnataka Weather: ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ
ಮಳೆImage Credit source: Mint
ನಯನಾ ರಾಜೀವ್
|

Updated on: Dec 26, 2023 | 7:30 AM

Share

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ, ಒಣಹವೆ ಇದೆ.

ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಚಳಿ, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ

ಧಾರವಾಡದಲ್ಲಿ 11 ಡಿಗ್ರಿ, ಬಾಗಲಕೋಟೆ ಹಾಗೂ ಬೀದರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 13.5 ಡಿಗ್ರಿ,. ಹಾವೇರಿಯಲ್ಲಿ 13.6 ಡಿಗ್ರಿ ,ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14 ಡಿಗ್ರಿ, ಬೆಳಗಾವಿ ನಗರ ಹಾಗೂ ಕೊಪ್ಪಳದಲ್ಲಿ 15 ಡಿಗ್ರಿ ಸೆಲ್ಸಿಯಸ್‌, ರಾಯಚೂರಿನಲ್ಲಿ 15.8 ಡಿಗ್ರಿ ಹಾಗೂ ಕಲಬುರಗಿಯಲ್ಲಿ 17.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶವು ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 14 ಡಿಗ್ರಿ, ಚಿತ್ರದುರ್ಗದಲ್ಲಿ 14.6 ಡಿಗ್ರಿ, ಚಿಂತಾಮಣಿಯಲ್ಲಿ 14.7 ಡಿಗ್ರಿ ಹಾಗೂ ಬೆಂಗಳೂರು ನಗರದಲ್ಲಿ 15 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಟ ಉಷ್ಣಾಂಶ ಕಂಡು ಬಂದಿದೆ. ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಮಂಜು ಕಾಣಿಸಲಿದೆ. ಭಾಗಶಃ ಮೋಡ ಕವಿದ ವಾತಾವರಣವೂ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್