Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ
ಮಳೆImage Credit source: Gagan Choudhury- Twitter
Follow us
ನಯನಾ ರಾಜೀವ್
|

Updated on:Jun 05, 2023 | 7:21 AM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನಾಪೋಕ್ಲು, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರ, ಅರಕಲಗೂಡು, ಮೂರ್ನಾಡು, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ, ಮೈಸೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿರಲಿದೆ.

ಹಾಗೆಯೆ ಹವಾಮಾನದಲ್ಲಿ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನಗಳ ಮುಂಗಾರು ವಿಳಂಬ ಆಗಲುಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರತಿಭಾರಿಯೂ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಿಂದ ಕೇರಳ ಪ್ರವೇಶ ಮಾಡುತ್ತಿತ್ತು. ಈ ಮೂಲಕ ಕೆಲವು ದಿನಗಳಲ್ಲಿ ಕರ್ನಾಟಕವನ್ನೂ ಕೂಡ ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ನಾಲ್ಕು ದಿನ ವಿಳಂಬ ಎನ್ನುವಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:21 am, Mon, 5 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ