Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಜೂನ್​ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ
ಮಳೆ
Image Credit source: Gagan Choudhury- Twitter

Updated on: Jun 05, 2023 | 7:21 AM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನಾಪೋಕ್ಲು, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರ, ಅರಕಲಗೂಡು, ಮೂರ್ನಾಡು, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ, ಮೈಸೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿರಲಿದೆ.

ಹಾಗೆಯೆ ಹವಾಮಾನದಲ್ಲಿ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನಗಳ ಮುಂಗಾರು ವಿಳಂಬ ಆಗಲುಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರತಿಭಾರಿಯೂ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಿಂದ ಕೇರಳ ಪ್ರವೇಶ ಮಾಡುತ್ತಿತ್ತು. ಈ ಮೂಲಕ ಕೆಲವು ದಿನಗಳಲ್ಲಿ ಕರ್ನಾಟಕವನ್ನೂ ಕೂಡ ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ನಾಲ್ಕು ದಿನ ವಿಳಂಬ ಎನ್ನುವಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:21 am, Mon, 5 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us