AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ 2 ದಿನ ಮಳೆ

ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Weather: ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ 2 ದಿನ ಮಳೆ
ಮಳೆImage Credit source: The Weather Channel
ನಯನಾ ರಾಜೀವ್
|

Updated on: Apr 18, 2023 | 7:30 AM

Share

ಮುಖ್ಯಾಂಶಗಳು

  • ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆ
  • ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ
  • ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ

ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್​, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಅಲ್ಲಲ್ಲಿ ಮಳೆ, ಅಲ್ಲಲ್ಲಿ ಬಿಸಿಲು. ಇದು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆ. ಇದೀಗ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್