ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.
ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಎಚ್ಎಎಲ್ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ
ಅಲ್ಲಲ್ಲಿ ಮಳೆ, ಅಲ್ಲಲ್ಲಿ ಬಿಸಿಲು. ಇದು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆ. ಇದೀಗ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.