Karnataka Weather: ಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದ 5ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ

Updated on: Apr 03, 2024 | 7:55 AM

ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗಲಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us