Karnataka Weather: ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರ್ನಾಟಕದಾದ್ಯಂತ ಮತ್ತೆ ಚುರುಕಾಗಲಿದೆ. ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್ 27: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ.
ಸಿಂದಗಿ, ಹುಣಸಗಿ, ಕಕ್ಕೇರಿ, ಕೆಂಭಾವಿ, ಚಿಂಚೋಳಿ, ಔರಾದ್, ಭಾಲ್ಕಿ, ದೇವರಹಿಪ್ಪರಗಿ, ಹುಮ್ನಾಬಾದ್, ಇಂಡಿ, ನೆಲೋಗಿ, ಸೈದಾಪುರ, ಭಾಗಮಂಡಲ, ಬೀದರ್, ಗೇರುಸೊಪ್ಪ, ಗುರುಮಿಟ್ಕಲ್, ಕುಣಿಗಲ್, ಲೋಂಡಾ, ಮಾಗಡಿ, ಮಾನ್ವಿ, ನಾಪೋಕ್ಲು, ಪುತ್ತೂರು, ಸೇಡಂ, ಅಫ್ಝಲ್ಪುರ, ಆಗುಂಬೆ, ಅಜ್ಜಂಪುರ, ಬಾದಾಮಿ, ಬಾಳೆಹೊನ್ನೂರು, ಬಂಟವಾಳ, ಬೆಳ್ಳಟ್ಟಿ, ಭದ್ರಾವತಿ, ಗಬ್ಬೂರು, ಹರಪನಹಳ್ಳಿ, ಜಯಪುರ, ಕಲಬುರಗಿ, ಕೊಟ್ಟಿಗೆಹಾರ, ಕುಂದಾಪುರ, ಮುದ್ದೇಬಿಹಾಳ, ಮೈಸೂರು, ನಾರಾಯಣಪುರ, ಶಾಹಪುರ, ಶೃಂಗೇರಿ, ತ್ಯಾಗರ್ತಿ, ಝಲ್ಕಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Weather : ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ವಿಪರೀತ ಮಳೆ, ಯೆಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 24.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.




