Karnataka Weather: ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕರ್ನಾಟಕದಾದ್ಯಂತ ಮತ್ತೆ ಚುರುಕಾಗಲಿದೆ. ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಮಳೆ

Updated on: Sep 27, 2025 | 7:26 AM

ಬೆಂಗಳೂರು, ಸೆಪ್ಟೆಂಬರ್ 27: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

ಸಿಂದಗಿ, ಹುಣಸಗಿ, ಕಕ್ಕೇರಿ, ಕೆಂಭಾವಿ, ಚಿಂಚೋಳಿ, ಔರಾದ್, ಭಾಲ್ಕಿ, ದೇವರಹಿಪ್ಪರಗಿ, ಹುಮ್ನಾಬಾದ್, ಇಂಡಿ, ನೆಲೋಗಿ, ಸೈದಾಪುರ, ಭಾಗಮಂಡಲ, ಬೀದರ್, ಗೇರುಸೊಪ್ಪ, ಗುರುಮಿಟ್ಕಲ್, ಕುಣಿಗಲ್, ಲೋಂಡಾ, ಮಾಗಡಿ, ಮಾನ್ವಿ, ನಾಪೋಕ್ಲು, ಪುತ್ತೂರು, ಸೇಡಂ, ಅಫ್ಝಲ್​ಪುರ, ಆಗುಂಬೆ, ಅಜ್ಜಂಪುರ, ಬಾದಾಮಿ, ಬಾಳೆಹೊನ್ನೂರು, ಬಂಟವಾಳ, ಬೆಳ್ಳಟ್ಟಿ, ಭದ್ರಾವತಿ, ಗಬ್ಬೂರು, ಹರಪನಹಳ್ಳಿ, ಜಯಪುರ, ಕಲಬುರಗಿ, ಕೊಟ್ಟಿಗೆಹಾರ, ಕುಂದಾಪುರ, ಮುದ್ದೇಬಿಹಾಳ, ಮೈಸೂರು, ನಾರಾಯಣಪುರ, ಶಾಹಪುರ, ಶೃಂಗೇರಿ, ತ್ಯಾಗರ್ತಿ, ಝಲ್ಕಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather : ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ವಿಪರೀತ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 24.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us