Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ

ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದಂತೆ ಹಲವೆಡೆ ವರುಣನ ಆಗಮನವಾಗಿ ಭೂಮಿ ತಂಪಾಗಿದೆ. ಇನ್ನೂ ಕೆಲವೆಡೆ ಮಳೆ ಬಂದ ಬಳಿಕ ಸೆಕೆ ಮತ್ತಷ್ಟು ಹೆಚ್ಚಾಗಿದೆ.

Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆ
Image Credit source: Pixabay

Updated on: Mar 31, 2023 | 7:36 AM

ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದಂತೆ ಹಲವೆಡೆ ವರುಣನ ಆಗಮನವಾಗಿ ಭೂಮಿ ತಂಪಾಗಿದೆ. ಇನ್ನೂ ಕೆಲವೆಡೆ ಮಳೆ ಬಂದ ಬಳಿಕ ಸೆಕೆ ಮತ್ತಷ್ಟು ಹೆಚ್ಚಾಗಿದೆ. ಮೈಸೂರು, ಬಂಡೀಪುರ, ಚನ್ನಪಟ್ಟಣ, ಚಾಮರಾಜನಗರ, ಶ್ರೀರಂಗಪಟ್ಟಣದಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್​ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ 39.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 13.6 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಸಂಜೆ-ರಾತ್ರಿ ವೇಳೆಗೆ ಮೋಡಮುಸುಕಿದ ವಾತಾವರಣ ಕಂಡುಬರುತ್ತದೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡು ಭಾಗವು 16 ಜಿಲ್ಲೆಗಳನ್ನು ಒಳಗೊಂಡಿದೆ. ಆ ಪೈಕಿ ಬಳ್ಳಾರಿಯಲ್ಲಿ ಮತ್ತು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಒಣಹವೆ ಮುಂದುವರಿಯಲಿದೆ. ಇಲ್ಲಿ ಯಾವುದೇ ಮಳೆ ಸಂಭವ ಇಲ್ಲ ಎನ್ನಲಾಗಿದೆ.

ಇಷ್ಟು ಜಿಲ್ಲೆ ಹೊರತುಪಡಿಸಿ ಈ ಭಾಗದ ‘ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು’ಜಿಲ್ಲೆಗಳ ಹಲವೆಡೆ ಹಗುರು ಇಲ್ಲವೇ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಈ ವೇಳೆ ಗಾಳಿಯ ವೇಗ ಹೆಚ್ಚಿರಲಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 7:34 am, Fri, 31 March 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us