Karnataka Weather: ಉಡುಪಿ, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

|

Updated on: Apr 20, 2023 | 7:49 AM

ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಉಡುಪಿ, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಮಳೆ
Image Credit source: Popular Mechanics
Follow us on

ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಏಪ್ರಿಲ್ 21ರಂದು ಸ್ವಲ್ಪ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.

ಎಚ್​ಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಕೆಲವೆಡೆ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯೊಂದಿಗೆ ಗಂಟೆಗೆ 50 ರಿಂದ 70 ಕಿಲೋಮೀಟರ್ ವೇಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

ಮತ್ತಷ್ಟು ಓದಿ: Karnataka Weather: ಚಿಕ್ಕಮಗಳೂರು, ಕೊಡಗಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಇನ್ನೊಂದೆಡೆ ಉತ್ತರಾಖಂಡದ ಹವಾಮಾನದ ಪ್ರಕಾರ, ಮುಂದಿನ 72 ಗಂಟೆಗಳ ಕಾಲ ಪರ್ವತಗಳಿಂದ ಬಯಲು ಸೀಮೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 19 ರಿಂದ ಏಪ್ರಿಲ್ 21 ರವರೆಗೆ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಗುಡುಗು ಸಹಿತ ಗಾಳಿ ಮತ್ತು ಲಘು ಮಳೆಯು ಗರಿಷ್ಠ ತಾಪಮಾನವನ್ನು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ಗೆ ಇಳಿಸುವ ನಿರೀಕ್ಷೆಯಿದೆ, ಇದು ಬಿಸಿಲಿನ ತಾಪದಿಂದ ಜನರಿಗೆ ಸ್ವಲ್ಪ ರಿಲೀಫ್ ನೀಡಬಹುದು. ದೆಹಲಿಯ ಮುಖ್ಯ ಹವಾಮಾನ ಕೇಂದ್ರ ಸಫ್ದರ್‌ಜಂಗ್ ವೀಕ್ಷಣಾಲಯವು ಬುಧವಾರ ಬೆಳಿಗ್ಗೆ ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಇದು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ