Karnataka Rains: ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಗುಡುಗು ಸಹಿತ ಭಾರಿ ಮಳೆ, ಅ.26ರವರೆಗೂ ಯೆಲ್ಲೋ ಅಲರ್ಟ್​

|

Updated on: Oct 20, 2024 | 7:59 AM

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಗುಡುಗು ಸಹಿತ ಮಳೆಯಾಗಿದೆ. ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಗುಡುಗು ಸಹಿತ ಭಾರಿ ಮಳೆ, ಅ.26ರವರೆಗೂ ಯೆಲ್ಲೋ ಅಲರ್ಟ್​
ಮಳೆ
Image Credit source: PTI
Follow us on

ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ, ಈಗ 7 ಗಂಟೆಯ ಮೇಲೆ ಸ್ವಲ್ಪ ಬಿಡುವು ಕೊಟ್ಟಿದೆ. ಆದರೆ ಅಕ್ಟೋಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನ ಎಲ್ಲೆಲ್ಲಿ ಮಳೆಯಾಗಿದೆ?
ಮೆಜೆಸ್ಟಿಕ್, ಶಾಂತಿನಗರ, ತ್ಯಾಗರಾಜನಗರ, ಜಯನಗರ, ಜೆಪಿನಗರ, ಶ್ರೀನಗರ, ಕೆಆರ್​ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆ.ಆರ್​.ಪುರಂ, ಟಿನ್ ಫ್ಯಾಕ್ಟರಿ
ಮಹದೇವಪುರ, ಬೆಳ್ಳಂದೂರು, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್​ ಬೋರ್ಡ್​, ಬಿಟಿಎಂ ಲೇಔಟ್, ಜೆ.ಪಿ.ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, R.Rನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕರ್ನಾಟಕದಾದ್ಯಂತ ಎಲ್ಲೆಲ್ಲಿ ಮಳೆಯಾಗಿದೆ?
ನಾಗಮಂಗಲ, ನಾಯಕನಹಟ್ಟಿ, ಬರಗೂರು, ನಾರಾಯಣಪುರ, ಕವಡಿಮಟ್ಟಿ, ಕಕ್ಕೇರಿ, ಹೆಸರಘಟ್ಟ, ಬೆಳ್ಳೂರು, ಕೆಂಭಾವಿ, ಚಿತ್ರದುರ್ಗ, ಬೇಲೂರು, ಕೃಷ್ಣರಾಜಪೇಟೆ, ಹುಣಸಗಿ, ರೋಣ, ರಾಯಚೂರು, ಮುರಗೋಡು, ಯಡವಾಡ, ಗುಬ್ಬಿ, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಮಾಗಡಿ, ಪರಶುರಾಂಪುರ, ಶಾಹಪುರ, ಸೇಡಂ, ಶೋರಾಪುರ, ಬಾದಾಮಿ, ಯಲಬುರ್ಗಾದಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರಿಗೆ ಆರೆಂಜ್ ಅಲರ್ಟ್​, ಅಕ್ಟೋಬರ್ 23ರವರೆಗೂ ಮಳೆ

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ, ಕನಿಷ್ಠ ಉಷ್ಣಾಂಶ ದಾಖಲಾಗಿದೆ?
ಪಣಂಬೂರಿನಲ್ಲಿ 32.06 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀನಿಂದ 45 ಕಿ.ಮೀ ವೇಗದಲ್ಲಿ ಚಲಿಸಲಿದೆ. ಹೊನ್ನಾವರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ