Karnataka Rain: ಏಪ್ರಿಲ್ 2ರಿಂದ ಕೊಡಗು, ಮೈಸೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ. ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಮಾರ್ಚ್ 30: ಕರ್ನಾಟಕದಾದ್ಯಂತ ಏಪ್ರಿಲ್2ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.
ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಬೆಳಗಾವಿ ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 am, Sun, 30 March 25