Karnataka Rain: ಏಪ್ರಿಲ್ 2ರಿಂದ ಕೊಡಗು, ಮೈಸೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ. ಏಪ್ರಿಲ್​ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rain: ಏಪ್ರಿಲ್ 2ರಿಂದ ಕೊಡಗು, ಮೈಸೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Mar 30, 2025 | 7:33 AM

ಬೆಂಗಳೂರು, ಮಾರ್ಚ್​ 30: ಕರ್ನಾಟಕದಾದ್ಯಂತ ಏಪ್ರಿಲ್​2ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಬೆಳಗಾವಿ ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Sun, 30 March 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us