Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇನ್ನೇನು ಮಳೆ ಕಡಿಮೆಯಾಗಿ ಬಿಸಿಲು ಬಂತು ಅನ್ನೋವಷ್ಟೊತ್ತಿಗೆ ಮತ್ತೆ ಮಳೆ ಶುರುವಾಗಿದೆ. ಕರ್ನಾಟಕದ ಕರಾವಳಿ, ಉತ್ತರ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಮತ್ತೆ ಮಳೆ(Rain) ಚುರುಕಾಗಿದೆ. 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ. ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮುದ್ದೇಬಿಹಾಳ, ಕಮಲಾಪುರ, ಕ್ಯಾಸಲ್ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಬಂಟವಾಳ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರದಲ್ಲಿ ಮಳೆಯಾಗಿದೆ.
ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ, ಕೆಂಭಾವಿ, ಎಚ್ಡಿಕೋಟೆ, ಧರ್ಮಸ್ಥಳ, ಚಿಂಚೋಳಿ, ಬೀದರ್, ಭಾಲ್ಕಿ, ಭಾಗಮಂಡಲ, ಔರಾದ್, ಅಥಣಿ, ಅಫ್ಝಲ್ಪುರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಸೆ.21ರವರೆಗೂ ಮಳೆ
ಬೆಂಗಳೂರಿನ ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.




