Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಕರ್ನಾಟಕದ ವಿವಿಧೆಡೆ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಮಳೆ
Image Credit source: PTI

Updated on: Nov 07, 2024 | 7:30 AM

ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಗಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉಳಿದೆಡೆ ಒಣಹವೆ ಇತ್ತು.

ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಚಂಡಮಾರುತ ಪರಿಚಲನೆ ಮುಂದುವರೆಯುತ್ತಿದೆ. ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಚಂಡಮಾರುತ ಭೀತಿ, ಮುಂದಿನ 3 ದಿನಗಳಲ್ಲಿ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us