Karnataka Weather: ಚಂಡಮಾರುತ: ಅಕ್ಟೋಬರ್ 8ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

Karnataka Weather: ಚಂಡಮಾರುತ: ಅಕ್ಟೋಬರ್ 8ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಮಳೆ

Updated on: Oct 02, 2025 | 7:27 AM

ಬೆಂಗಳೂರು, ಅಕ್ಟೋಬರ್ 02: ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಇದರಿಂದಾಗಿ ಕರ್ನಾಟಕ, ಒಡಿಶಾ, ಆಂಧ್ರಪ್ರದೇಶ ಸೇರಿ ಹಲವೆಡೆ ಮಳೆ(Rain)ಯಾಗಲಿದೆ. ಚಂಡಮಾರುತದ ಪ್ರಭಾವದಿಂದಾಗಿ ಉತ್ತರ ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಪ್ರಭಾವ ಕರ್ನಾಟಕದ ಮೇಲೂ ಆಗಲಿದ್ದು, ಅಕ್ಟೋಬರ್ 8ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಯಲ್ಲಾಪುರದಲ್ಲಿ ಭಾರಿ ಮಳೆಯಾಗಿದೆ, ಹೊನ್ನಾವರ, ಆಗುಂಬೆ, ಅಂಕೋಲಾ, ಕ್ಯಾಸಲ್​ರಾಕ್, ಗೇರುಸೊಪ್ಪ, ಮಂಕಿ, ಕದ್ರಾ, ಕಾರವಾರ, ಕೋಟಾ, ಕೊಟ್ಟಿಗೆಹಾರ, ಕುಮಟಾ, ಕುಂದಾಪುರ, ಲೋಂಡಾ, ಮಂಗಳೂರು, ಮುಂಡಗೋಡಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿಯಲ್ಲಿ ಮಳೆ, ಉಳಿದೆಡೆ ಒಣಹವೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us