Karnataka Weather: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗೆಯೇ ತಾಪಮಾನದಲ್ಲೂ ಕೂಡ ಏರಿಕೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಲಿದೆ.
ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉಷ್ಣಾಂಶ ಹೆಚ್ಚಲಿದೆ.
ಕಲಬುರ್ಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಹೊನ್ನಾವರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ರಾಯಚೂರಿನಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು
ಬೀದರ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ