Karnataka Rains: ಕರ್ನಾಟಕದಾದ್ಯಂತ ನವೆಂಬರ್ 9ರ ಬಳಿಕ ಮತ್ತೆ ಹೆಚ್ಚಾಗಲಿದೆ ಮಳೆ

ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ನವೆಂಬರ್ 9ರಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ನವೆಂಬರ್ 9ರ ಬಳಿಕ ಮತ್ತೆ ಹೆಚ್ಚಾಗಲಿದೆ ಮಳೆ
ಮಳೆ
Image Credit source: PTI

Updated on: Nov 04, 2024 | 7:39 AM

ಕರ್ನಾಟಕದ ಹಲವು ಭಾಗಗಳಲ್ಲಿ ಕೊಂಚ ಕೂಡ ಬಿಡುವು ಕೊಡದೆ ಮಳೆಯಾಗುತ್ತಿದೆ. ನವೆಂಬರ್ 9ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 2 ದಿನಗಳ ಕಾಲ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶೋರಾಪುರ, ಹುಣಸೂರು, ಕೋಲಾರ, ಪೊನ್ನಂಪೇಟೆ, ಕೆಆರ್​ನಗರ, ಮಹಾಲಿಂಗಪುರ, ಯಡ್ರಾಮಿ ಸೈದಾಪುರ, ಬಸವನ ಬಾಗೇವಾಡಿ, ನಾಗಮಂಗಲದಲ್ಲಿ ಮಳೆಯಾಗಿದೆ.
ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್​ 6ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ

ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us