Karnataka Rains: ಚಂಡಮಾರುತ: ಇಂದಿನಿಂದ ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಚಂಡಮಾರುತ: ಇಂದಿನಿಂದ ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Apr 10, 2025 | 7:51 AM

ಬೆಂಗಳೂರು, ಏಪ್ರಿಲ್ 10: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಮಳೆ(Rain)ಯಾಗುವ ಸಾಧ್ಯತೆಗಳು ಹೆಚ್ಚಿವೆ. ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಭಾಗಮಂಡಲ, ಕುಮಟಾ, ಬಸವನಬಾಗೇವಾಡಿ, ಖಾನಾಪುರ, ಯಡ್ರಾಮಿ, ಕಳಸ, ಹಳಿಯಾಳ, ಜೋಯಿಡಾ, ಪುತ್ತೂರು, ಹುನಗುಂದ, ರಬಕವಿ, ಹುಕ್ಕೇರಿ, ಅಫ್ಜಲ್​ಪುರ, ಬೆಳಗಾವಿ, ಸರಗೂರು, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರ ಮಳೆ

ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಕೆಲವು ರಾಜ್ಯಗಳ ಮೇಲಾಗಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us