AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ

ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದೆ. ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆರ್ದ್ರತೆ ಹೆಚ್ಚಿದ್ದರೆ, ಉತ್ತರ ಕರ್ನಾಟಕದಲ್ಲಿ ತಾಪಮಾನ 40°C ದಾಟಬಹುದು. ಮೈಸೂರು, ಕೋಲಾರ, ಮಲೆನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 23, 2026 | 6:17 AM

Share

ಬೆಂಗಳೂರು, ಏ.23: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂಪಾದ ವಾತಾವರಣ ಮನೆಮಾಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದರೂ, ಉಷ್ಣಾಂಶವು ಹೆಚ್ಚಿರಲಿದೆ. ಸಮುದ್ರ ತೀರದಲ್ಲಿ ಆರ್ದ್ರತೆ (Humidity) ಹೆಚ್ಚಿರುವ ಕಾರಣ ಸೆಖೆಯ ಅನುಭವ ಜಾಸ್ತಿ ಇರಲಿದೆ.ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನವು 40°C ದಾಟುವ ಸಾಧ್ಯತೆಯಿದೆ.

ನಗರದಲ್ಲಿ ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ದಾಖಲಾಗಬಹುದು. ಸಂಜೆ ವೇಳೆಗೆ ಮೋಡಕವಿದ ವಾತಾವರಣವಿದ್ದು, ಲಘು ಮಳೆಯ ನಿರೀಕ್ಷೆಯಿದೆ. ಇನ್ನು ಮೈಸೂರು ಹಾಗೂ ಕೋಲಾರದಲ್ಲಿ ಈ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 33°C – 35°C ಆಸುಪಾಸಿನಲ್ಲಿರಲಿದೆ. ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಸ್ವಲ್ಪ ಹೆಚ್ಚಿರಲಿದ್ದು, ಚದುರಿದಂತೆ ಮಳೆಯಾಗಲಿದೆ. ಕಾಫಿ ತೋಟಗಳಿಗೆ ಈ ಮಳೆ ಪೂರಕವಾಗಲಿದೆ. ತಂಪಾದ ಗಾಳಿ ಬೀಸಲಿದ್ದು, ಹವಾಮಾನವು ಆಹ್ಲಾದಕರವಾಗಿರಲಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಭಾವಕ್ಕೆ ಆಗದೇ ಇರುವುದೂ ಆಗಲಿದೆ

ಹುಬ್ಬಳ್ಳಿ – ಧಾರವಾಡ ಈ ಅವಳಿ ನಗರಗಳಲ್ಲಿ ಬಿಸಿಲಿನ ತಾಪಮಾನವು ಹೆಚ್ಚಿರಲಿದೆ (ಸುಮಾರು 37°C – 39°C). ಆದರೆ, ವಾತಾವರಣದಲ್ಲಿನ ಬದಲಾವಣೆಯಿಂದಾಗಿ ಸಂಜೆ ವೇಳೆಗೆ ತುಂತುರು ಮಳೆಯಾಗುವ ಅಥವಾ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಧೂಳಿನ ಮಿಶ್ರಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 am, Thu, 23 April 26

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ