AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು.

Karnataka Weather: ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ
ಬೇಸಿಗೆ Image Credit source: Business Standard
ನಯನಾ ರಾಜೀವ್
|

Updated on: Mar 03, 2025 | 7:31 AM

Share

ಬೆಂಗಳೂರು, ಮಾರ್ಚ್​ 3:   ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.

ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್​, ಉತ್ತರ ಕರ್ನಾಟಕದ ಕಲಬುರಗಿಯಲ್ಲಿ 36-37 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ಬೆಂಗಳೂರು ಮತ್ತು ಆಗುಂಬೆಯಲ್ಲಿ 34-36 ಡಿಗ್ರಿ ಸೆಲ್ಸಿಯಸ್​ನಷ್ಟಿರುತ್ತದೆ.

ಉತ್ತರ ಒಳನಾಡಿನ ವಿಜಯಪುರದಲ್ಲಿ ಕನಿಷ್ಠ ತಾಪಮಾನ ಗಮನಾರ್ಹವಾಗಿ ಇಳಿಕೆ ಕಂಡಿದೆ. ಬೀದರ್ ಮತ್ತು ಧಾರವಾಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇದೆ. ದಕ್ಷಿಣ ಒಳನಾಡಿನ ಒಳನಾಡಿನ ಬೆಂಗಳೂರು ನಗರ, ಚಿಂತಾಮಣಿಯಲ್ಲಿ ಸ್ವಲ್ಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಣಹವೆ, ಕರಾವಳಿಯಲ್ಲಿ ಉಷ್ಣ ಅಲೆ

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ