Karnataka Weather: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

Karnataka Weather: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ
ಮಳೆ
Image Credit source: Business Standard

Updated on: Apr 14, 2025 | 7:23 AM

ಬೆಂಗಳೂರು, ಏಪ್ರಿಲ್ 14: ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಇಂದು ಗುಡುಗು ಸಹಿತ ಮಳೆ(Rain)ಯಾಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಎನ್​ಆರ್​ಪುರ, ಧರ್ಮಸ್ಥಳ, ಜಯಪುರ, ಸರಗೂರು, ಹಾವೇರಿ, ಕೃಷ್ಣರಾಜಪೇಟೆ, ಮಾಗಡಿ, ಚಿತ್ರದುರ್ಗ, ಟಿಜಿ ಹಳ್ಳಿ, ಕೋಲಾರ, ಚಿಕ್ಕಮಗಳೂರು, ಶೃಂಗೇರಿ, ಗುಬ್ಬಿ, ಕುಣಿಗಲ್​ನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಿರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Rains: ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಕರ್ನಾಟಕದ 20 ಜಿಲ್ಲೆಗಳಿಗೆ ಅಲರ್ಟ್

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us