Karnataka Rains: ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

ಕಳೆದ ಎರಡು ದಿನಗಳಿಂದ ಮಳೆ ಕೊಂಚ ಬಿಡುವು ಪಡೆದಿತ್ತು, ಇಂದಿನಿಂದ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು
ಮಳೆ
Image Credit source: The Week

Updated on: Jul 30, 2024 | 8:22 AM

ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಭಾಗಮಂಡಲ, ಮೂರ್ನಾಡು, ನಾಪೊಕ್ಲು, ಯಲ್ಲಾಪುರ, ಕೊಲ್ಲೂರು, ಕೊಟ್ಟಿಗೆಹಾರ, ಪೊನ್ನಂಪೇಟೆ, ಕಮ್ಮರಡಿ, ಧರ್ಮಸ್ಥಳ, ಲೋಂಡಾ, ಬೆಳಗಾವಿ, ಕಳಸ, ಆಗುಂಬೆ, ಸಿದ್ದಾಪುರ, ಬೆಳ್ತಂಗಡಿ, ಶೃಂಗೇರಿ, ಸುಳ್ಯ, ಎನ್​ಆರ್​ಪುರ, ಉಪ್ಪಿನಂಗಡಿ, ಕುಮಟಾ, ನಿಪ್ಪಾಣಿ, ಕಮಲಾಪುರ, ಚಿತ್ತಾಪುರ, ಬಾಳೆಹೊನ್ನೂರು, ಹಾರಂಗಿ, ಎಚ್​ಡಿ ಕೋಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬರಗಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us