
ಬೆಂಗಳೂರು, ನವೆಂಬರ್ 13: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸ್ವಲ್ಪ ಪ್ರಮಾಣದಲ್ಲಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆ(Rain)ಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ.
ಬೀದರ್ನಲ್ಲಿ 13 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಬೆಳಗಾವಿ ಏರ್ಪೋರ್ಟ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.2ಡಿಗ್ರ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.