AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಚಂಡಮಾರುತ ಪ್ರಭಾವ, ಬೆಂಗಳೂರಲ್ಲಿ ಮಳೆ ಜೋರು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಮಳೆಯಾಗುತ್ತಿದೆ. ಶಕ್ತಿ ಚಂಡಮಾರುತದ ಪರಿಣಾಮ ಹೆಚ್ಚು ಮಳೆಯಾಗುತ್ತಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಚಂಡಮಾರುತ ಪ್ರಭಾವ, ಬೆಂಗಳೂರಲ್ಲಿ ಮಳೆ ಜೋರು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Oct 06, 2025 | 7:43 AM

Share

ಬೆಂಗಳೂರು, ಅಕ್ಟೋಬರ್ 06: ಶಕ್ತಿ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗುತ್ತಿದೆ. ಮುಂಗಾರು ಆರಂಭದ ದಿನಗಳಲ್ಲಿರುವಂತೆ ದಡ್ಡ ಮೋಡಕವಿದು ಜೋರು ಮಳೆ(Rain)ಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಠಾಳ, ಬೀದರ್, ಚಿಂಚೋಳಿ, ಹುಮ್ನಾಬಾದ್, ಹೊಸಕೋಟೆ, ಕೋಲಾರ, ಚಿಂತಾಮಣಿ, ಬೆಂಗಳೂರು ಎಚ್​ಎಎಲ್​, ಭಾಲ್ಕಿ, ಗೋಪಾಲನಗರದಲ್ಲಿ ಮಳೆಯಾಗಿದೆ. ಶಕ್ತಿ ಚಂಡಮಾರುತದ ಪ್ರಭಾವ ತಮಿಳುನಾಡು, ಬಿಹಾರ ಹಾಗೂ ಮಹಾರಾಷ್ಟ್ರದ ಮೇಲೆ ಹೆಚ್ಚಾಗಿ ಆಗಲಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.11ರವರೆಗೂ ಮಳೆ

ಕಲಬುರಗಿ ಹಾಗೂ ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್​ಪೋರ್ಟ್​​ನಲ್ಲಿ 19.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!