Karnataka Weather: ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 25ರಿಂದ ಮಳೆಯಾಗಲಿದೆ.

Karnataka Weather: ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಮಳೆ
Image Credit source: PTI

Updated on: Mar 21, 2025 | 7:19 AM

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದೆ. ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 25ರಿಂದ ಮಳೆಯಾಗಲಿದೆ.

ಶಿವಮೊಗ್ಗದ ಕೆಲವು ತಾಲೂಕುಗಳು, ಶೃಂಗೇರಿ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಕಲಬುರಗಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನ ಮಳೆ
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌
ಮಾರ್ಚ್​ 12ರಿಂದ 3 ದಿನಗಳ ಕಾಲ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ:
Karnataka Weather: ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಗರಿಷ್ಠ ತಾಪಮಾನವು ಕರಾವಳಿ ಕರ್ನಾಟಕದಲ್ಲಿ 24-27 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಶನಿವಾರದಂದು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಮೀಸಲಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us